ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಾರತದ ಸರ್ವೋಚ್ಛ ನ್ಯಾಯಾಲಯ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಅವರು ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸುಬ್ರಮಣ್ಯ ಕ್ಷೇತ್ರದಲ್ಲಿ ವಿಶಿಷ್ಟ ಪೂಜೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ಅಬ್ದುಲ್ ನಜೀರ್ ಸಲ್ಲಿಸಿದರು.
ಈ ವೇಳೆ ದೇವಸ್ಥಾನದ ಆಡಳಿತಮಂಡಳಿಯವರು ನ್ಯಾಯಮೂರ್ತಿಗಳಿಗೆ ವಿಶೇಷ ಗೌರವ ಸಲ್ಲಿಸಿದರು. ಅಬ್ದುಲ್ ನಜೀರ್ ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದಾರೆ, ಜನವರಿ 1 ತನಕ ದ.ಕ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Kshetra Samachara
27/12/2021 04:02 pm