ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ ಸಮರ್ಪಣೆ

ಉಡುಪಿ:ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಕಾಶೀ ಮಠ ಸಂಸ್ಥಾನದ ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಕೊಡಮಾಡಿದ ಪಚ್ಚೆ ಕಲ್ಲಿನ ಸ್ವರ್ಣ ಹಾರವನ್ನು ಇಂದು ಪರ್ಯಾಯ ಶ್ರೀಗಳಿಗೆ ಹಸ್ತಾಂತರಿಸಲಾಯಿತು. ಗೌಡ ಸಾರಸ್ವತ ಸಮಾಜದ ದೇವಸ್ಥಾನಗಳ ಪ್ರಮುಖರು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ಹಸ್ತಾಂತರಿಸಿದರು.

ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚಿಸಿ ಪ್ರಪಂಚದ ಎಲ್ಲ ವಸ್ತುಗಳೂ ಭಗವಂತನ ಕೊಡುಗೆಗಳಾಗಿವೆ ಎಂಬ ಅನುಸಂಧಾನದ ಮೂಲಕ ದೇವರಿಗೆ ವಸ್ತುಗಳ ಸಮರ್ಪಣೆಯಾಗಬೇಕು. ಶ್ರೀಕೃಷ್ಣನ ವಿಗ್ರಹದಲ್ಲಿ ದೇವರನ್ನು ನೋಡಿ ಈ ಹಾರವನ್ನು ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಸಮರ್ಪಿಸುತ್ತಿದ್ದಾರೆ ಎಂದು ಹೇಳಿದರು.

ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ಇತ್ತೀಚಿಗೆ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ದ್ಯೋತಕವಾಗಿ ಈ ಹಾರವನ್ನು ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಕೊಟ್ಟಿದ್ದಾರೆಂದು ಜಿ.ಎಸ್‌.ಬಿ ದೇವಸ್ಥಾನಗಳ ಒಕ್ಕೂಟದ ಉಪಾಧ್ಯಕ್ಷ ದಿನೇಶ್ ಕಾಮತ್ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ ರಘುಪತಿ ಭಟ್, ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ರಾಘವೇಂದ್ರ ಕಿಣಿ, ಕೋಟೇಶ್ವರ ಪಟ್ಟಾಾಭಿರಾಮಚಂದ್ರ ದೇವಸ್ಥಾನದ ಆಡಳಿತೆ ಮೊಕ್ತೇಸರ ಶ್ರೀಧರ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

31/12/2021 06:47 pm

Cinque Terre

7.09 K

Cinque Terre

0

ಸಂಬಂಧಿತ ಸುದ್ದಿ