ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಭಾವೀ ಪರ್ಯಾಯ ಪೀಠಾಧೀಶರಾದ ಕೃಷ್ಣಾಪುರ ಮಠಾದೀಶ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿ ಫಲ ಮಂತ್ರಾಕ್ಷತೆ ನೀಡಿ ಪರ್ಯಾಯ ಮಹೋತ್ಸವಕ್ಕೆ ಆಹ್ವಾನ ನೀಡಿದರು
ಈ ಸಂಧರ್ಭದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರಿದಾಸ್ ಭಟ್, ದೇವಳದ ಪ್ರಧಾನ ಅರ್ಚಕ ಮಧುಸೂದನ್ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಲ್. ಕೆ. ಸಾಲ್ಯಾನ್, ಪುರುಷೋತ್ತಮ ರಾವ್, ವಿಜಯ ಕುಮಾರ್ ರೈ, ವಿಶ್ವನಾಥ , ವಿಪುಲ ಡಿ ಶೆಟ್ಟಿಗಾರ್, ಶಾರದಾ ಡಿ ಬಂಗೇರ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಮೋಹನದಾಸ್, ಸದಸ್ಯರುಗಳಾದ ಸುಗಂಧಿ ಕೊಂಡಾಣ, ದೇವಳದ ಸಿಬಂಧಿ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
02/01/2022 09:03 pm