ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಕೊರಗಜ್ಜ ವೇಷ; ವಿಕೃತಿ ಮೆರೆದವರ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ವಿಟ್ಲ: ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ಮುಸ್ಲಿಂ ಮದುವೆ ಸಮಾರಂಭದ ಔತಣಕೂಟದಲ್ಲಿ ಮದುಮಗನಿಗೆ ಶ್ರೀ ಕೊರಗಜ್ಜನ ವೇಷ ಭೂಷಣ ಧರಿಸಿ ಕೊರಗಜ್ಜನಿಗೆ ಅವಮಾನ ಮಾಡಿದ ಬಗ್ಗೆ ವೀಡಿಯೊ ವೈರಲ್ ಆಗಿದ್ದು, ನಾನಾ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಅವಹೇಳನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಖಂಡಿಸಿದ್ದು, ತುಳುನಾಡಿನ ದೈವಾರಾಧನೆ ಬಗ್ಗೆ ವಿಕೃತಿ ಮೆರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾಸಕರು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

ಬಿಜೆಪಿ ಬಂಟ್ವಾಳ ಮಂಡಲ ವತಿಯಿಂದ ಘಟನೆಯನ್ನು ಖಂಡಿಸಲಾಗಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.  ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಯುವಮೋರ್ಚಾ ಮಂಡಲ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಸಾಮಾಜಿಕ ಜಾಲತಾಣದ ಮನೋಜ್, ಪ್ರಮುಖರಾದ ಪುಷ್ಪರಾಜ್ ಚೌಟ, ಲೋಹಿತ್ ಕೆಳಗಿನ ಅಗರಿ, ನಾಗೇಶ್ ಶೆಟ್ಟಿ ಕೊಡಂಗಾಯಿ, ಅಭಿಷೇಕ್ ರೈ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

07/01/2022 07:52 pm

Cinque Terre

16.45 K

Cinque Terre

2

ಸಂಬಂಧಿತ ಸುದ್ದಿ