ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ವಠಾರದಲ್ಲಿ ಹತ್ತನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ಭಕ್ತಿಭಾವದಿಂದ ಸರಳ ರೀತಿಯಲ್ಲಿ ನಡೆಯಿತು.
ಶನಿವಾರ ರಾತ್ರಿ ಪಡಿಪೂಜೆ, ಭಾನುವಾರ ಪ್ರಾತಃಕಾಲ ಧರ್ನಪ್ಪ ಸ್ವಾಮಿ ಹಾಗೂ ಗುಣಪಾಲ ಸ್ವಾಮಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು 7ಗಂಟೆಗೆ ಇರುಮುಡಿ ಕಟ್ಟುವುದರ ಮೂಲಕ ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಗೆ ಚಾಲನೆ ನೀಡಲಾಯಿತು.
ಮಧ್ಯಾಹ್ನ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಸೀತಾರಾಮ್ ಭಟ್ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಆದಿಧನ್,ಕಿಶೋರ್ ಶೆಟ್ಟಿ, ಶಿಮಂತೂರು ಯುವಕ ಹಾಗೂ ಮಹಿಳಾ ಮಂಡಲದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
09/01/2022 05:37 pm