ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಗೈದು, ಶಬರಿಮಲೆಗೆ ಹೊರಟ ಮುಂಬೈ ಮಾಲಾಧಾರಿಗಳು

ಕೊಲ್ಲೂರು: ಮುಂಬೈಯ ಶ್ರೀ ಧರ್ಮಸ್ಥಳ ಅಯ್ಯಪ್ಪ ಭಕ್ತ ವೃಂದ ಶಬರಿಮಲೆ ಯಾತ್ರೆ ಮಾಡುತ್ತಿದೆ. ಶಿಬಿರದಲ್ಲಿ 67 ಮಾಲಾಧಾರಿಗಳಿದ್ದು, 40 ವರ್ಷಗಳಿಂದಲೂ ಯಾತ್ರೆ ಮಾಡುತ್ತಿದ್ದಾರೆ. ತಂಡದಲ್ಲಿ ಕರ್ನಾಟಕ ಕರಾವಳಿಯವರು, ಮಹಾರಾಷ್ಟ್ರದವರೂ ಇದ್ದಾರೆ.

ಹೊಟೇಲ್, ಬ್ಯಾಂಕ್ ಸೇರಿದಂತೆ ಬೇರೆ ಬೇರೆ ಉದ್ಯಮ ಮಾಡುವ ಗೆಳೆಯರ ತಂಡ ಪ್ರತಿವರ್ಷ ಯಾತ್ರೆಯನ್ನು ಮಾಡುತ್ತಿದೆ. ಮುಂಬೈನಿಂದ ರೈಲಿನ ಮೂಲಕ ಬಂದ ಶ್ರೀ ಅಯ್ಯಪ್ಪ ಮಾಲಾಧಾರಿಗಳು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಮಾಡಿ, ಉಡುಪಿಯ ಕಸ್ತೂರ್ಬಾ ನಗರದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಪೂಜೆ ಸಂದರ್ಭ ಸ್ಥಳೀಯರೂ ವ್ರತಾಚರಣೆ ಕೈಗೊಂಡು ಮುಂಬೈನ ತಂಡದ ಜೊತೆ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಶ್ರೀ ಅಯ್ಯಪ್ಪ ಸ್ವಾಮಿಯ ಭಜನೆ ಸಂದರ್ಭ ಮಾಲಾಧಾರಿಯೊಬ್ಬರು ಆವೇಶಭರಿತರಾದರು. ಗುರುಸ್ವಾಮಿಗಳಿಂದ ವಿಶೇಷ ಪೂಜೆ, ಆರತಿ ನಡೆಯಿತು. ಈ ಸಂದರ್ಭ ಸಾರ್ವಜನಿಕರಿಗೆ ಮಧ್ಯಾಹ್ನದ ಅನ್ನ ಸಂತರ್ಪಣೆ ಇತ್ತು.

Edited By : Manjunath H D
Kshetra Samachara

Kshetra Samachara

10/01/2022 02:30 pm

Cinque Terre

8.09 K

Cinque Terre

0

ಸಂಬಂಧಿತ ಸುದ್ದಿ