ಉಡುಪಿ: ಬಹುನಿರೀಕ್ಷೆಯ ಧಾರ್ಮಿಕ ಉತ್ಸವ, ನಾಡಹಬ್ಬ ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಘೋಷಿಸಿದ್ದಾರೆ .
ಸಮಿತಿ ಗೌರವಾಧ್ಯಕ್ಷ ಕೆ ಸೂರ್ಯನಾರಾಯಣ ಉಪಾಧ್ಯಾಯರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ರಾತ್ರಿ ನಡೆದ ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ಪ್ರಮುಖರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಕೋವಿಡ್ ಪರಿಸ್ಥಿತಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ಣವಾಗಿ ಸಹಕರಿಸಬೇಕೆನ್ನುವ ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಶ್ರೀಪಾದರ ಆಶಯದಂತೆ ಜನವರಿ 17 ರ ನಡುರಾತ್ರಿ ನಡೆಯಲಿರುವ ( 18 ರ ನಸುಕಿನ ವೇಳೆ) ಬಹುನಿರೀಕ್ಷೆಯ ಪರ್ಯಾಯೋತ್ಸವ ಮೆರವಣಿಗೆ ಮತ್ತು ನಂತರ ರಾಜಾಂಗಣದಲ್ಲಿ ನಡೆಯಲಿರುವ ಪರ್ಯಾಯ ದರ್ಬಾರ್ ಸಭೆಯನ್ನು ತೀರಾ ಸಾಂಪ್ರದಾಯಿಕತೆಗೆ ಆದ್ಯತೆ ನೀಡಿ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ.
Kshetra Samachara
16/01/2022 08:47 pm