ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ವೈಭವದ ರಥೋತ್ಸವ

ವಿಟ್ಲ: ಇತಿಹಾಸ ಪ್ರಸಿದ್ದ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು.

ರಾತ್ರಿ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮಿಸಿದ ಬಳಿಕ ರಥೋತ್ಸವ ಆರಂಭಗೊಂಡಿತು. ಈ ವೇಳೆ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ನೂರಾರು ಭಕ್ತಾದಿಗಳು ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು. ರಥೋತ್ಸವದ ಬಳಿಕ ದೇವರ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಿತು.

ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾ ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡುವಂತೆ ಧ್ವನಿವರ್ಧಕದಲ್ಲಿ ದೇವಾಲಯದ ವತಿಯಿಂದ ಮನವಿ ಮಾಡಲಾಗಿತ್ತು.

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಊರ-ಪರವೂರಿನ ಸಾವಿರಾರು ಭಕ್ತಾದಿಗಳು ಬೆಳಿಗ್ಗಿನಿಂದಲೇ ದೇವಾಲಯಕ್ಕೆ ಆಗಮಿಸಲಾರಂಭಿಸಿದರು. ಮುಖ್ಯರಸ್ತೆಯಿಂದ ದೇವಾಲಯಕ್ಕೆ ತೆರಳುವ ಎಲ್ಲಾ ಒಳರಸ್ತೆಯಲ್ಲಿ ಬೆಳಿಗ್ಗಿನಿಂದಲೇ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.

Edited By : Manjunath H D
Kshetra Samachara

Kshetra Samachara

22/01/2022 02:14 pm

Cinque Terre

7.36 K

Cinque Terre

0

ಸಂಬಂಧಿತ ಸುದ್ದಿ