ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಫೆ. 3 ರಿಂದ 7 ರ ತನಕ ಕಣಿಯೂರು ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ವಿಟ್ಲ: ಪುರಾಣ ಪ್ರಸಿದ್ಧ ಕಣ್ವ ಮುನಿಗಳ ಸಂಕಲ್ಪಿತ ಶ್ರೀ ಕಣಿಯೂರು ಕ್ಷೇತ್ರದಲ್ಲಿ ಸುಮಾರು 40 ವರ್ಷಗಳ ಹಿಂದೆ ಪುಟ್ಟ ಶ್ರೀಚಾಮುಂಡೇಶ್ವರಿ ಗುಡಿ ಸ್ಥಾಪನೆಯಾಗಿತ್ತು. 2001 ರಲ್ಲಿ ದೇವಾಲಯದ ಪುನರ್ ನಿರ್ಮಾಣ ಪುನರ್ ಪ್ರತಿಷ್ಠೆಯಾಗಿತ್ತು. ಇದೀಗ ಮೂರನೆಯ ಬಾರಿ ಆಗಮ ಶಾಸ್ತ್ರ ಪ್ರಕಾರ ದೇಗುಲ ನಿರ್ಮಾಣಗೊಂಡಿದ್ದು, ಫೆ. 3 ರಿಂದ 7 ರ ತನಕ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಐದಾರು ವರ್ಷಗಳಿಂದ ದೇವಾಲಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಸುಂದರ ವಿನ್ಯಾಸದಲ್ಲಿ ಗರ್ಭಗುಡಿ, ನಮಸ್ಕಾರ ಮಂಟಪದೊಂದಿಗೆ ದೇಗುಲ ನಿರ್ಮಾಣಗೊಂಡಿದೆ ಎಂದು ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಹೇಳಿದರು.

ಅವರು ಭಾನುವಾರ ಶ್ರೀ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಲ್ಲಿ ನಡೆಯುವ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಬಗ್ಗೆ ವಿವರಣೆ ನೀಡಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿ

ಫೆ.3 ರಂದು ಮಧ್ಯಾಹ್ನ 2.30ಕ್ಕೆ ಹಸಿರುವಾಣಿ ಶೋಭಾಯಾತ್ರೆ ಕನ್ಯಾನ ಕುಟ್ಟಿತ್ತಡ್ಕ ಶ್ರೀ ವಿಷ್ಣುಮೂರ್ತಿ ಭಜನಾಮಂದಿರದಿಂದ ಶ್ರೀ ಕ್ಷೇತ್ರಕ್ಕೆ ಸಾಗಿ ಬರಲಿದೆ. ಸಂಜೆ 5 ಗಂಟೆಗೆ ಉಗ್ರಾಣ ಮುಹೂರ್ತ ನಡೆಯಲಿದೆ. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ, ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಮಾತಾನಂದಮಯಿ ಆಶೀರ್ವಚನ ನೀಡಲಿದ್ದಾರೆ. ಮುಗುಳಿ ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Edited By : Nagesh Gaonkar
Kshetra Samachara

Kshetra Samachara

23/01/2022 07:26 pm

Cinque Terre

5.09 K

Cinque Terre

0

ಸಂಬಂಧಿತ ಸುದ್ದಿ