ಉಡುಪಿ: ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ಎಂಟು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
"ಪ್ರಕರಣದ ವಿವರಗಳು ಗೊಂದಲದ ಸಂಗತಿಯಾಗಿದೆ. ದೂರಿನಲ್ಲಿ ಮಾಡಲಾದ ಆರೋಪಗಳು 'ಶಿಕ್ಷಣದ ಹಕ್ಕು ಉಲ್ಲಂಘನೆಯನ್ನು' ಒಳಗೊಂಡಿದ್ದು, ಸ್ವರೂಪದಲ್ಲಿ ಗಂಭೀರದ್ದಾಗಿದೆ. ಆದ್ದರಿಂದ ಪ್ರಕರಣವು ವಿದ್ಯಾರ್ಥಿನಿಯರ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯನ್ನು ಒಳಗೊಂಡಿದೆ,'' ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಉಡುಪಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ನೋಟಿಸ್ ಕಳುಹಿಸಲಾಗಿದೆ.
Kshetra Samachara
28/01/2022 11:31 am