ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೂಡುವಲು ಉತ್ಸವ ಪ್ರಯುಕ್ತ ಸೇವಾ ಯುವಕ ವೃಂದದ 46ನೇ ವಾರ್ಷಿಕ ಭಜನಾ ಮಂಗಲೋತ್ಸವ "ಏಕಾಹ ಭಜನೆ"ಕಾರ್ಯಕ್ರಮ ನಡೆಯಿತು.
ಭಜನಾ ಕಾರ್ಯಕ್ರಮಕ್ಕೆ ದೇವಸ್ಥಾನದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ ದೀಪ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಉದ್ಯಮಿ ಅರವಿಂದ್ ಪೂಂಜಾ, ಸುನಿಲ್ ಆಳ್ವ, ಡಾ.ಹರಿಶ್ಚಂದ್ರ ಸಾಲ್ಯಾನ್, ಜೀವನ್ ಶೆಟ್ಟಿ ಕಾರ್ನಾಡು, ಮಹಿಮ್ ಹೆಗ್ಡೆ, ಯುವಕ ವೃಂದದ ಅಧ್ಯಕ್ಷ ಕೃಷ್ಣ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.
Kshetra Samachara
03/02/2022 11:09 am