ಮುಲ್ಕಿ: ಮುಲ್ಕಿ ಒಂಬತ್ತು ಮಾಗಣೆಯ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮೂಡುವಲು ಉತ್ಸವ ವಿಜ್ರಂಭಣೆಯಿಂದ ನಡೆಯಿತು.ಪ್ರಾತಃಕಾಲ ದೇವಸ್ಥಾನದಲ್ಲಿ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಗಣಹೋಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ, ಶ್ರೀ ದೇವರ ಬಲಿ ಉತ್ಸವ , ಪಲ್ಲಪೂಜೆ,ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಅತ್ತೂರು ಬೈಲ್ ವೆಂಕಟರಾಜ ಉಡುಪ, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ್ ಅಮೀನ್, ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಗುರುವಪ್ಪ ಕೋಟ್ಯಾನ್, ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ರಾತ್ರಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಪೂಜೆ ದೇವರ ಬಲಿ ಉತ್ಸವ ನಡೆಯಿತು.
Kshetra Samachara
04/02/2022 04:10 pm