ಪಬ್ಲಿಕ್ ನೆಕ್ಸ್ಟ್ ವಿಶೇಷ
ಬೆಳ್ತಂಗಡಿ; ಕರಾವಳಿ ಭಾಗದಲ್ಲಿ ಗುಳಿಗ ದೈವದ ಆರಾಧನೆಗೆ ವಿಶೇಷ ಆಕರ್ಷಣೆ ಇದೆ. ಗುಳಿಗ ದೈವದ ರೋಷಾವೇಷ ನೋಡೋದೇ ಒಂದು ರೋಮಾಂಛಕ ಅನುಭವ. ಸಾಮಾನ್ಯವಾಗಿ ಒಂದು ಗುಳಿಗ ದೈವಕ್ಕೆ ಆರಾಧನೆ ನಡೆಯುವುದು ಮಾಮೂಲಿ. ಆದ್ರೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟೆಡೆ ಗ್ರಾಮದ ಬರ್ಕಜೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಹಾಗೂ ನವಗುಳಿಗ ಕ್ಷೇತ್ರದಲ್ಲಿ ನವ ಗುಳಿಗ ದೈವ ನೆಲೆಯೂರಿದೆ. ಒಂದೇ ದಿನ ಒಂದೇ ಬಾರಿ ಈ ನವ ಗುಳಿಗ ದೈವಗಳಿಗೆ ಇಲ್ಲಿ ಗಗ್ಗರ ಸೇವೆ ನಡೆಯುತ್ತದೆ. ಈ ಬಾರಿಯ ವಾರ್ಷಿಕ ಉತ್ಸವವೂ ಸಹ ಅತ್ಯಂತ ಯಶಸ್ವಿಯಾಗಿ ನಡೆಯಿತು.
ದುರ್ಗಾಪರಮೇಶ್ವರಿಯ ಸನ್ನಿದಿಯ ಮುಂಭಾಗದಲ್ಲೇ ಈ ನವ ಗುಳಿಗನ ಸಾನಿಧ್ಯ ಇದ್ದು, ಈ ಹಿಂದೆ ಒಂದು ಗುಳಿಗ ದೈವಕ್ಕೆ ಮಾತ್ರ ನೇಮೋತ್ಸವ ನಡೆಯುತ್ತಿತ್ತು. ಆದ್ರೆ ಮೂರು ವರ್ಷದ ಹಿಂದೆ ಪ್ರಶ್ನಾ ಚಿಂತನೆಯಲ್ಲಿ ನವಗುಳಿಗ ದೈವ ಇಲ್ಲಿ ನೆಲೆಯೂರಿದೆ ಎಂದು ತಿಳಿದುಬಂದಿತ್ತು.
ಹೀಗಾಗಿ ಕಳೆದ ಮೂರು ವರ್ಷಗಳಿಂದ ನವಗುಳಿಗ ದೈವಗಳಿಗೆ ಉತ್ಸವ ನಡೆಯುತ್ತಿದೆ. ಈ ಸಾರಿಯೂ ಏಕಕಾಲದಲ್ಲಿ ಒಂಬತ್ತು ಮಂದಿ ದೈವ ನರ್ತಕರು ನವ ಗುಳಿಗನ ನೇಮೋತ್ಸವ ನಡೆಸಿಕೊಟ್ಟರು. ಈ ಅದ್ಭುತವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು...
PublicNext
06/02/2022 09:46 pm