ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು :ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಬೈಂದೂರು : ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಎಂದಿನಂತೆ ಹಿಜಾಬ್ ಧರಿಸಿ ಬಂದಿದ್ದು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ .

ಈ ಸಂದರ್ಭ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಗೆ ಕರೆದೊಯ್ದು ಅಲ್ಲಿ ಕೂರಲು ವ್ಯವಸ್ಥೆ ಮಾಡಿದ್ದರು .ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಸರಕಾರದ ನೂತನ ಆದೇಶದ ಪ್ರಕಾರ ತರಗತಿಗೆ ಹಿಜಾಬ್ ಮತ್ತು ಕೇಸರಿ ಶಾಲು ಧರಿಸಿ ಬರುವ ಹಾಗಿಲ್ಲ ಎಂದು ಪೋಷಕರ ಸಭೆಯಲ್ಲಿ ಪೋಷಕರಿಗೆ ಮನವರಿಕೆ ಮಾಡಿ ತಿಳಿಸಿದರು.

ಕಾಲೇಜಿನ ಬಳಿ ಯಾವುದೇ ಪ್ರತಿಭಟನೆ ನಡೆಸಬಾರದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸ್ಥಳಕ್ಕೆ ಬೈಂದೂರು ಪೊಲೀಸ್ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

Edited By :
Kshetra Samachara

Kshetra Samachara

07/02/2022 08:10 pm

Cinque Terre

6.6 K

Cinque Terre

0

ಸಂಬಂಧಿತ ಸುದ್ದಿ