ಮಂಗಳೂರು: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಳ್ಳಾಲದ ಸಯ್ಯದ್ ಮದನಿ ದರ್ಗಾದಲ್ಲಿ ವಾರ್ಷಿಕ ಉರೂಸ್ ನಡೆಯುತ್ತಿರುವುದರಿಂದ ಫೆ. 10ರಿಂದ ಮಾರ್ಚ್ 6ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6ರ ವರೆಗೆ ಉಳ್ಳಾಲ ಮತ್ತು ಸೋಮೇಶ್ವರ ಬೀಚ್‌ಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉರೂಸ್ ನಲ್ಲಿ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಳ್ಳುವುದರಿಂದ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಲಾಗಿದೆ. ಉಳ್ಳಾಲ, ಉಳಿಯ, ನೆಹರೂ ನಗರ, ಸೋಮೇಶ್ವರ, ಉಚ್ಚಿಲ, ಮೊಗವೀರಪಟ್ಣ, ಪೆರಿಬೈಲ್, ಬಟ್ಟಪ್ಪಾಡಿ ಬೀಚ್‌ಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಇನ್ನು, ಕೋವಿಡ್ ನಿಯಮಾವಳಿ ಪಾಲಿಸುವುದನ್ನು ಮೇಲ್ವಿಚಾರಣೆ ಮಾಡಲು ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತರನ್ನು ಸೆಕ್ಟರ್ ಮ್ಯಾಜಿಸ್ಟ್ರೇಟ್ ಆಗಿ ನೇಮಿಸಲಾಗಿದೆ.
Kshetra Samachara
12/02/2022 02:28 pm