ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ಜರಗಿತು.
ದೇಗುಲದ ಪ್ರಧಾನ ತಂತ್ರಿಗಳಾದ ಪಾದೂರು ಲಕ್ಷ್ಮೀ ನಾರಾಯಣ ತಂತ್ರಿ ಇವರ ನೇತೃತ್ವದಲ್ಲಿ ಅರ್ಚಕ ಲಕ್ಷ್ಮೀಶ್ ಭಟ್ ಉಪಸ್ಥಿತಿಯಲ್ಲಿ ಧ್ವಜಾರೋಹಣ ಪೂರ್ವಕ ವಿವಿಧ ಧಾರ್ಮಿಕ – ವಿಧಿ ವಿಧಾನಗಳು ಜರಗಿದವು.
ಇಂದಿನಿಂದ ಶನಿವಾರದವರಗೆ ಪ್ರತಿನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ವಿಶ್ವನಾಥ ಕುಲಾಲ್, ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಆಚಾರ್ಯ, ಮಹಿಳಾ ಮಂಡಳಿಯ ಅಧ್ಯಕ್ಷೆ ಸುನಿತಾ ಲಕ್ಷ್ಮೀಶ್ ಭಟ್ ಸೇರಿದಂತೆ ಊರ ಪರ ಊರ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
01/03/2022 03:05 pm