ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಶಿವರಾತ್ರಿ ಸಡಗರ: ಪೂಜೆ ,ಸಿಯಾಳಾಭಿಷೇಕ

ಕಟಪಾಡಿ: ಉಡುಪಿ ಜಿಲ್ಲೆಯ ಶಿವನ ದೇವಾಲಯಗಳಲ್ಲಿ ಇಂದು ಶಿವರಾತ್ರಿ ಸಂಭ್ರಮ ಮನೆ ಮಾಡಿದೆ.ಆಸ್ತಿಕರು ಬೆಳಿಗ್ಗಿನಿಂದಲೇ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಕಟಪಾಡಿಯ ಪ್ರಸಿದ್ಧ ವಿಶ್ವನಾಥ ಕ್ಷೇತ್ರದಲ್ಲಿ ಶಿವರಾತ್ರಿ ಪ್ರಯುಕ್ತ ದೇವರ ಆರಾಧನೆಗಳು ನಡೆಯುತ್ತಿವೆ. ಭಜನೆ ಶಿವನಾಮ ಸ್ಮರಣೆ,

ಸಿಯಾಳಾಭಿಷೇಕ ಮತ್ತು ವಿಶೇಷ ಪೂಜೆಗಳೊಂದಿಗೆ ಭಕ್ತರು ದೇವರ ಕೃಪೆಗೆ ಪಾತ್ರರಾದರು.ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ನೆರವೇರಿಸಿದರು. ಶಿವರಾತ್ರಿ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಕರ್ಷಕ ಹೂವಿನ ಅಲಂಕಾರ ಮಾಡಲಾಗಿದೆ.

Edited By : Shivu K
Kshetra Samachara

Kshetra Samachara

01/03/2022 03:50 pm

Cinque Terre

12.82 K

Cinque Terre

0

ಸಂಬಂಧಿತ ಸುದ್ದಿ