ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ರುದ್ರಭೂಮಿ ದೇವಭೂಮಿಯಲ್ಲಿ ಹಿಂದೂ ರುದ್ರಭೂಮಿ ಸಮಿತಿ ಹಾಗೂ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ವತಿಯಿಂದ ಮಹಾಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು.
ಸಾಮಾನ್ಯವಾಗಿ ರುದ್ರಭೂಮಿಯೆಂದರೆ ಭಯಪಟ್ಟುಕೊಳ್ಳುತ್ತಾರೆ. ಮಹಿಳೆಯರಂತೂ ಇತ್ತ ಕಾಲಿಡುವುದೇ ಅಪರೂಪ. ಆದರೆ, ಇಲ್ಲಿ ಯಾವುದೇ ಭಯವಿಲ್ಲದೇ ಮಧ್ಯರಾತ್ರಿಯವರೆಗೂ ಗುಂಪುಗುಂಪಾಗಿ ಜನಜಮಾಯಿಸಿ, ದೇವ ಸಂಕೀರ್ತನೆಯಲ್ಲಿ ಪಾಲ್ಗೊಂಡು ಬೃಹತ್ ಶಿವನ ಪ್ರತಿಮೆಯ ಬಳಿ ಕರ್ಪೂರ ಹಚ್ಚಿ ಪ್ರಾರ್ಥನೆ ಸಲ್ಲಿಸಿದರು.
ಸಜಿಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ರುದ್ರಭೂಮಿಯಲ್ಲಿ ಹಿಂದೂ ರುದ್ರಭೂಮಿ ಸಮಿತಿ ಹಾಗೂ ಹಿಂದೂ ರುಧ್ರಭೂಮಿ ಅಭಿವೃದ್ಧಿ ಸಮಿತಿ, ಮಹಾಶಿವರಾತ್ರಿ ಪ್ರಯುಕ್ತ ಆಯೋಜಿಸಿದ್ದ ಭಜನಾ ಸಂಕೀರ್ತನೆ ದೇವಭೂಮಿ ಎಂಬ ನಾಮವನ್ನು ಸಾಕ್ಷೀಕರಿಸಿತು.
ಭಜನಾ ಸಂಕೀರ್ತನೆಯಲ್ಲಿ ತಾಲೂಕಿನ ಸುಮಾರು 12ಕ್ಕೂ ಅಧಿಕ ಭಜನಾ ತಂಡಗಳು ಭಾಗವಹಿಸಿದವು. ಒಟ್ಟಿನಲ್ಲಿ ಸ್ಮಶಾನದ ಮಹತ್ವವನ್ನು ಎತ್ತಿ ಹಿಡಿಯುವಲ್ಲಿ ಈ ದಿನ ಮಹಾಶಿವರಾತ್ರಿಯ ಸಂಭ್ರಮ ಯಶಸ್ವಿಯಾಯಿತು.
Kshetra Samachara
02/03/2022 08:14 am