ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಸಂಭ್ರಮದ ಹಗಲು ರಥೋತ್ಸವ

ಮುಲ್ಕಿ: ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹಗಲು ರಥೋತ್ಸವ ದೇವಳದ ತಂತ್ರಿಗಳಾದ ಕೊಡವೂರು ಶ್ರೀ ರಾಧಾಕೃಷ್ಣ ಉಪಾಧ್ಯಾಯ, ಅರ್ಚಕ ಪಿ.ಗಣೇಶ್ ಭಟ್ ಹಾಗೂ ಪಿ ವಾಸುದೇವರಾವ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ 9:45ಕ್ಕೆ ಮಹಾಪೂಜೆ ಬಳಿಕ ಶ್ರೀದೇವರ ಉತ್ಸವ ಬಲಿ ಹೊರಟು ರಥಾರೋಹಣ, ಪಲ್ಲ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ರಾತ್ರಿ ಶ್ರೀ ದೇವರಿಗೆ ಹೂವಿನ ಪೂಜೆ, ಬಯನ ಬಲಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಟ್ಟೆಪೂಜೆ, ಮೆಟ್ಲುದೀಪ, ಶ್ರೀ ಭೂತಬಲಿ, ಕವಾಟ ಬಂಧನ ನಡೆಯಿತು.

ಈ ಸಂದರ್ಭ ವೇದಮೂರ್ತಿ ಕೃಷ್ಣಭಟ್ ಪಾವಂಜೆ, ಎಸಿಪಿ ಮಹೇಶ್ ಕುಮಾರ್, ವೇದಮೂರ್ತಿ ರಂಗನಾಥ್ ಭಟ್, ದೇವಸ್ಥಾನದ ಆಡಳಿತ ಮೊಕ್ತೇಸರ ಸೂರ್ಯಕುಮಾರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಎಸ್ ಕೆಪಿಎ ಸಹಕಾರಿ ಸಂಘದ ನಿರ್ದೇಶಕ ಮೋಹನ್ ರಾವ್ ಉಪಸ್ಥಿತರಿದ್ದರು. ಮಂಗಳವಾರ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವ, ತೆಪ್ಪೋತ್ಸವ ಹಾಗೂ ಧ್ವಜಾವರೋಹಣ ನಡೆಯಲಿದೆ.

Edited By :
Kshetra Samachara

Kshetra Samachara

07/03/2022 01:26 pm

Cinque Terre

18.11 K

Cinque Terre

0

ಸಂಬಂಧಿತ ಸುದ್ದಿ