ಶಿರೂರು : ಶಿರೂರು ಮಠದ ಆಡಳಿತ ವ್ಯಾಪ್ತಿಗೆ ಒಳಪಟ್ಟಿರುವ ಬೈರಂಪಳ್ಳಿ ಜಂಬಿ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಮಾತನಾಡಿರುವ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮತ್ತು ಕಾರ್ಯದರ್ಶಿ,ದೇವಾಲಯದ ಒಟ್ಟು ಜೀರ್ಣೋದ್ಧಾರಕ್ಕೆ 55 ಲಕ್ಷ ರೂ. ಖರ್ಚು ಮಾಡಲಾಗಿದ್ದು ಇದರ ಒಟ್ಟು ವಿವರವನ್ನು ಶಿರೂರು ಮಠದ ಮ್ಯಾನೇಜರ್ ಅವರಿಗೆ ಒಪ್ಪಿಸಲಾಗಿದೆ. ಅವರು ಲೆಕ್ಕಪತ್ರ ಸಲ್ಲಿಕೆಯಾಗಿರುವ ಬಗ್ಗೆ ಹಿಂಬರಹ ನೀಡಿರುತ್ತಾರೆ.
ಆದರೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಬೈರಂಪಳ್ಳಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುತ್ತಾರೆ. ಈ ಆರೋಪದ ಬಗ್ಗೆ ತನಿಖೆ ನಡೆಸಲು ನಾವು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ.
ಈ ರೀತಿ ಸುಳ್ಳು ಆರೋಪ ಮಾಡುವ ಬದಲು ಸಂತೋಷ್ ಬೈರಂಪಳ್ಳಿ ಬಳಿ ಯಾವುದೇ ದಾಖಲೆಗಳಿದ್ದರೆ ದೇವಾಲಯಕ್ಕೆ ಬಂದು ದೇವರ ಮುಂದೆ ದಾಖಲೆಗಳನ್ನು ಹಾಜರು ಮಾಡಲಿ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ ಹೆಗಡೆ ಮಾಧ್ಯಮಗಳಿಗೆ ಹೇಳಿದ್ದಾರೆ.
Kshetra Samachara
09/03/2022 04:15 pm