ಕಾಪು: ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿ ಪೂಜೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳನ್ನು ನೀಡದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೂರು ಮಾರಿಗುಡಿಗಳ ಆಡಳಿತ ಮಂಡಳಿಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಹಿಂದೂ ಪರ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಹೊಸ ಮಾರಿಗುಡಿಯ ಮುಂಭಾಗದಲ್ಲಿ ಜಮಾಯಿಸಿ, ಯಾವುದೇ ಕಾರಣಕ್ಕೂ ಮಾರಿಗುಡಿ ಸುತ್ತಲಿನ ಪ್ರದೇಶದಲ್ಲಿ ಹಿಂದೂಯೇತರರಿಗೆ ಅಂಗಡಿಗಳನ್ನು ಹಾಕಲು ಅವಕಾಶ ಮಾಡಿಕೊಡದಂತೆ ಮನವಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸ್ಪಂಧಿಸಿದ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿಯು ತಮ್ಮ ದೇವಸ್ಥಾನದ ವ್ಯಾಪ್ತಿಯಲ್ಲಿ ಹಿಂದೂಯೇತರಿಗೆ ಅಂಗಡಿ ಹಾಕಲು ಅವಕಾಶ ನೀಡುವುದಿಲ್ಲ ಎಂದಿದೆ.
ಇತಿಹಾಸ ಪ್ರಸಿದ್ದ ಕಾಪು ಸುಗ್ಗಿ ಮಾರಿಪೂಜೆ ಜಾತ್ರೆಯಲ್ಲಿ ವಿವಿಧಡೆಗಳಿಂದ ಲಕ್ಷಾಂತರ ಮಂದಿ ಭಕ್ತಾಧಿಗಳು ಭಾಗವಹಿಸುತ್ತಾರೆ. ನೂರಾರು ಅಂಗಡಿಗಳ ಮೂಲಕ ಕೋಟ್ಯಾಂತರ ರೂಪಾಯಿ ವ್ಯವಹಾರವೂ ನಡೆಯುತ್ತದೆ.
ಹಿಜಾಬ್ ವಿವಾದ ಮತ್ತು ಅದರ ನಂತರದ ಬೆಳವಣಿಗೆಗಳು ಅನ್ಯ ಧರ್ಮಿಯರಿಗೆ ನೀಡಬಾರದೆಂಬ ಒತ್ತಾಯಕ್ಕೆ ಕಾರಣವಾಗಿದೆ.
PublicNext
18/03/2022 04:36 pm