ಮುಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಭಾಗಿಯಾಗಿ ಕಣ್ಮನ ತುಂಬಿಕೊಂಡರು.
ಜಾತ್ರಾ ಮಹೋತ್ಸವದ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಓಕುಳಿ,ಉತ್ಸವ ಬಲಿ, ಪಲ್ಲಕ್ಕಿ ಉತ್ಸವ ನಡೆದು ಶ್ರೀದೇವಿ ಸಸಿಹಿತ್ಲು ಭಗವತಿಯರ ಭೇಟಿ, ರಥೋತ್ಸವ, ಸುಡುಮದ್ದು ಪ್ರದರ್ಶನ ಬಳಿಕ ಜಲಕದ ಬಳಿ ನಡೆಯಿತು.
ಈ ಸಂದರ್ಭ ದೇವಸ್ಥಾನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಅರ್ಚಕ ಶ್ರೀಪತಿ ಉಪಾಧ್ಯಾಯ, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ವೆಂಕಟೇಶ್ ಹೆಬ್ಬಾರ್, ಕಿರಣ್ ಶೆಟ್ಟಿ ಕೊಲ್ನಾಡು ಗುತ್ತು ಮತ್ತಿತರರು ಉಪಸ್ಥಿತರಿದ್ದರು. ಶನಿವಾರ ದೇವಸ್ಥಾನದಲ್ಲಿ ಮಹಾ ಸಂಪ್ರೋಕ್ಷಣೆ ಮಹಾ ಮಂತ್ರಾಕ್ಷತೆ ನಡೆಯಲಿದೆ.
Kshetra Samachara
25/03/2022 07:43 am