ಕಿಲ್ಪಾಡಿ : ಮುಲ್ಕಿ ಸಮೀಪದ ಕಿಲ್ಪಾಡಿ ಕೋಡ್ದಬ್ಬು ದೈವಸ್ಥಾನದಲ್ಲಿ ಶ್ರೀ ಕೋರ್ದಬ್ಬು ಹಾಗೂ ತನ್ನಿಮಾನಿಗ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಶನಿವಾರ ಪ್ರಾತಃಕಾಲ ವಿಶೇಷ ಪ್ರಾರ್ಥನೆ ಬಳಿಕ ಚಪ್ಪರ ಮುಹೂರ್ತ, ದೊಂಪ ಏರುವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ, ಭಂಡಾರ ಇಳಿಯುವ ಕಾರ್ಯಕ್ರಮ ನಡೆದು ರಾತ್ರಿ ಶ್ರೀ ಕೋಡ್ದಬ್ಬು ಮತ್ತು ತನ್ನಿಮಾನಿಗ ದೈವಗಳ ನೇಮೋತ್ಸವ ನಡೆಯಿತು. ಭಾನುವಾರ ಸಂಜೆ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮೋತ್ಸವ ನಡೆಯಲಿದೆ.
ಈ ಸಂದರ್ಭ ಮಧ್ಯಸ್ಥ ಗೋಪಿನಾಥ ಪಡಂಗ, ರಾಜೇಶ್ ಕಿಲ್ಪಾಡಿ, ಸತೀಶ್ ಕಿಲ್ಪಾಡಿ, ಶಂಕರ್ ಪಡಂಗ, ದಯಾನಂದ, ದೈವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು ಭಕ್ತಾದಿಗಳು ಮತ್ತಿತರರು ಉಪಸ್ಥಿತರಿದ್ದರು.
PublicNext
27/03/2022 01:08 pm