ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೊಲ್ಲೂರಿನ 'ಸಲಾಂ ಮಂಗಳಾರತಿ' ಬಗ್ಗೆ ಅರ್ಚಕರು ಹೇಳಿದ್ದೇನು?

ಕೊಲ್ಲೂರು: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪರಂಪರಾಗತವಾಗಿ ನಡೆಯುತ್ತಿರುವ ಸಲಾಂ ಮಂಗಳಾರತಿ ಪೂಜೆ ಇದೀಗ ವಿವಾದಕ್ಕೀಡಾಗಿದೆ. ಟಿಪ್ಪು ಸುಲ್ತಾನ್ ನೆನಪಿನಲ್ಲಿ ನಡೆಯುತ್ತಿರುವ ಸಲಾಂ ಮಂಗಳಾರತಿ ಹೆಸರನ್ನು ತೆಗೆಯಬೇಕು ಎಂದು ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ದೇವಸ್ಥಾನದ ಪ್ರಧಾನ ಅರ್ಚಕರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ.

ದೇವಸ್ಥಾನದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ಪ್ರದೋಷ, ಎರಡು ರಾತ್ರಿ ಕಾಲದಲ್ಲಿ ಪೂಜೆ ನಡೆಯುತ್ತವೆ. ಇದೊಂದು ಬಹಳ ಅರ್ಥಗರ್ಭಿತವಾದ ಪೂಜೆ. ಪ್ರದೋಷ ಕಾಲ ಎಂಬುದಕ್ಕೆ ಬಹಳ ಮಹತ್ವವಿದೆ. ಪ್ರದೋಷ ಕಾಲದಲ್ಲಿ ಎಲ್ಲ ದೇವಿ ದೇವತೆಗಳ ಸಾನಿಧ್ಯ ಇರುತ್ತದೆ ಎಂಬ ನಂಬಿಕೆಯಿದೆ. ಪ್ರದೋಷ ಕಾಲದಲ್ಲಿ ನಡೆಯುವ ಪೂಜೆಗಳ ವೈಶಿಷ್ಟ ಬೇರೆಯೇ ಇದೆ. ನಾವು ಆ ಕಾಲದಲ್ಲಿ ದೇವಿಗೆ ಪೂಜೆಯನ್ನ ನಡೆಸುತ್ತೇವೆ ಎಂದು ಪ್ರಧಾನ ಅರ್ಚಕರಾದ ಕೆ.ವಿ ಶ್ರೀಧರ ಅಡಿಗ ತಿಳಿಸಿದ್ದಾರೆ.

ಕರುಣಾ ಕರುಣಿಕೆಯಲ್ಲಿ ಕೇಳಿಬಂದ ಪ್ರಕಾರ ದೊರೆ ಟಿಪ್ಪು ಪೂಜೆಯಲ್ಲಿ ಭಾಗವಹಿಸಿದ್ದ. ಪ್ರದೋಷ ಪೂಜೆ ಸಂದರ್ಭದಲ್ಲಿ ಸಲಾಮ್ ಮಾಡಿದ್ದ ಅಂತ ಕರುಣಾಕರುಣಿಕ ಅರ್ಥಾತ್ ವಾಡಿಕೆಯಾಗಿ ಬಂದಿದೆ. ಇದಕ್ಕೆ ಯಾವುದೇ ತರಹದ ದಾಖಲೆಗಳು ಇಲ್ಲ. ಇದೊಂದು ಹೇಳಿಕೊಂಡು ಬಂದಿರುವಂತಹ ಮಾತು. ಪ್ರದೋಷ ಪೂಜೆ ಪ್ರದೋಷ ಮಂಗಳಾರತಿ ಎಂದೇ ದಾಖಲೆಯಲ್ಲಿರುವ ಧಾರ್ಮಿಕ ಪ್ರಾಧಾನ್ಯತೆ ಈ ಪೂಜೆಗೆ ಇದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತಹ ಆಚರಣೆ. ರಾಷ್ಟ್ರದ ಯೋಗಕ್ಷೇಮಕ್ಕೋಸ್ಕರ ಪೂಜೆ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತದೆ. ಪೂಜೆ ಸಂದರ್ಭ ಟಿಪ್ಪು ಭಾಗವಹಿಸಿದ್ದ ಎಂದು ಹೇಳಿಕೊಂಡು ಬಂದಿದ್ದಾರೆ. ಹಾಗಾಗಿ ಈ ಹೆಸರು ಬಂದಿರಬಹುದು ಎಂದು ಅರ್ಚಕರು ಸ್ಪಷ್ಟನೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

28/03/2022 08:32 am

Cinque Terre

13.37 K

Cinque Terre

4