ಮುಲ್ಕಿ ಬಪ್ಪನಾಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಕೊಳಚಿಕಂಬಳ ಶ್ರೀ ಜಾರಂದಾಯ ದೈವಸ್ಥಾನದಲ್ಲಿ ಶ್ರೀ ಜಾರಂದಾಯ, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಮಾ. 27 ಭಾನುವಾರ ಸಂಜೆ ಭಂಡಾರ ಇಳಿದು ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮಾ. 28 ಸೋಮವಾರ ನಾಗ ಸನ್ನಿಧಿಯಲ್ಲಿ ನಾಗತಂಬಿಲ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಜಾರಂದಾಯ, ಧೂಮಾವತಿ ಮತ್ತು ಪರಿವಾರ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನೆರವೇರಿತು. ಮಾ.29 ಮಂಗಳವಾರ ಸಂಜೆ ಮಾಯಂದಾಳ ದೈವದ ನೇಮೋತ್ಸವ ನಡೆಯಿತು.
ಈ ಸಂದರ್ಭ ದೈವಸ್ಥಾನಕ್ಕೆ ಬೆಂಗಳೂರಿನ ಅಂತರರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮಿ ಭೇಟಿ ನೀಡಿದರು. ಅವರನ್ನು ದೇವಸ್ಥಾನದ ವತಿಯಿಂದ ವಿಶೇಷವಾಗಿ ಗೌರವಿಸಲಾಯಿತು. ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಕೊಳಚಿಕಂಬಳ ಊರ ಗುರಿಕಾರರು, ಧೂಮಾವತಿ ಸೇವಾ ಸಮಿತಿ ಮಹಿಳಾ ಮಂಡಳಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
29/03/2022 08:42 am