ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಲಕಾಡಿ: ಶಿರಿಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ ಸಂಭ್ರಮದ ಪಾಲಕಿ ಉತ್ಸವ

ಮುಲ್ಕಿ: ಮುಲ್ಕಿ ಸಮೀಪದ ಕೊಲಕಾಡಿ ಶಿರಡಿ ಶ್ರೀ ಸಾಯಿಬಾಬಾ ಮಂದಿರದಲ್ಲಿ 11ನೇ ವರ್ಷದ ಶ್ರೀ ರಾಮನವಮಿ ಉತ್ಸವ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನಡೆಯಿತು.

ಪ್ರಾತಃಕಾಲ ವಿಶೇಷ ಪ್ರಾರ್ಥನೆ ದೀಪಾರಾಧನೆ ಹಾಗೂ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.

ಸಂಜೆ ಸಾಯಿಬಾಬಾ ಮಂದಿರದಿಂದ ಪಂಜಿನಡ್ಕ ಶ್ರೀ ವಿಠೋಭಾ ರುಕುಮಾಯ ಮಂದಿರದವರೆಗೆ ಶ್ರೀ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ವಿವಿಧ ಬಿರುದಾವಳಿ ಗಳೊಂದಿಗೆ ವಿಜ್ರಂಭಣೆಯಿಂದ ಪಾಲಕಿ ಉತ್ಸವ ನಡೆಯಿತು. ಬಳಿಕ ಮಹಾಮಂಗಳಾರತಿ ನಡೆದು ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.

ಶಾಸಕ ಉಮನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಯುವನಾಯಕ ಮಿಥುನ್ ರೈ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಮುಲ್ಕಿ ನ.ಪಂ ಅಧ್ಯಕ್ಷ ಸುಭಾಶ್ ಶೆಟ್ಟಿ, ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಮತ್ತಿತರರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ಮಂದಿರದ ಅಧ್ಯಕ್ಷ ಈಶ್ವರ ಎಲ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

10/04/2022 08:28 pm

Cinque Terre

20.01 K

Cinque Terre

1