ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾವಂಜೆ: ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ರಥೋತ್ಸವ

ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನ ನಾಗವೃಜ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹಗಲು ರಥೋತ್ಸವವು ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ ದೇವಸ್ಥಾನದಲ್ಲಿ ವೇದ ಕೃಷಿಕ ಕೆಎಸ್ ನಿತ್ಯಾನಂದ ಹಾಗೂ ದೇವಸ್ಥಾನದ ತಂತ್ರಿಗಳಾದ ಯಾಜಿ ದಿವಾಕರ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಬಾಕಿಮಾರು ಗದ್ದೆಯಲ್ಲಿ ಹಗಲು ರಥೋತ್ಸವ ನಡೆಯಿತು.

ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ನಿರಂಜನ ಭಟ್, ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ಟ್ರಸ್ಟಿ ನಕ್ರೆ ಬಾಲಕೃಷ್ಣ ರಾವ್, ವಿದ್ಯಾಶಂಕರ್, ವಿನೋದ್ ಸಾಲ್ಯಾನ್ ಬೆಳ್ಳಾಯರು,ಎಸ್ ಕೆ ಪಿಎ ಮೋಹನ್ ರಾವ್,ಮತ್ತಿತರರು ಉಪಸ್ಥಿತರಿದ್ದರು.

ರಾತ್ರಿ ಶಯನೋತ್ಸವ ಹಾಗೂ ರಥೋತ್ಸವ ನಡೆಯಲಿದೆ. ಎ.19ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಚೂರ್ಣೋತ್ಸವ, ತುಲಾಭಾರ ಸೇವೆ, ಸಂಜೆ ಅವಭೃತೋತ್ಸವ, ಧ್ವಜಾವರೋಹಣ, ಅಣ್ಣಪ್ಪ ಸ್ವಾಮಿಗೆ ನರ್ತನ ಸೇವೆ ನಡೆಯಲಿದೆ.

Edited By : Shivu K
Kshetra Samachara

Kshetra Samachara

18/04/2022 02:48 pm

Cinque Terre

20.62 K

Cinque Terre

2

ಸಂಬಂಧಿತ ಸುದ್ದಿ