ಉಚ್ಚಿಲ: ಉಚ್ಚಿಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.
ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು ಮಹಾಲಕ್ಷ್ಮಿ ದೇವರ ದರ್ಶನ ಮಾಡಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು, ಇತ್ತೀಚೆಗಷ್ಟೇ ನವೀಕರಣಗೊಂಡ ದೇವಸ್ಥಾನ ಇದು. ಮಹಾಲಕ್ಷ್ಮಿ ದೇವರ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇನೆ. ಮಹಾಲಕ್ಷ್ಮೀ ನಾಡಿನ ಎಲ್ಲ ಜನರಿಗೂ ಸುಖ ಸಮೃದ್ಧಿ ಮತ್ತು ಆರೋಗ್ಯ ನೀಡಲಿ ಎಂದು ಹೇಳಿದರು
Kshetra Samachara
29/04/2022 03:29 pm