ಪುತ್ತೂರು: ಉತ್ತರ ಕನ್ನಡ ಜಿಲ್ಲೆಯ ಹಿಂದುಳಿದ ಪ್ರವರ್ಗ 1 ರಲ್ಲಿ ಬರುವ ಮೀನುಗಾರ ಮೊಗೇರ ಜಾತಿಯ ಜನರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಶಾಲೆ ದಾಖಲೆಗಳನ್ನು ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ನೈಜ ಪರಿಶಿಷ್ಟರ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡಿದ್ದಾರೆ ಎಂದು ದಕ್ಷಿಣಕನ್ನಡ ಜಿಲ್ಲಾ ಮುಗೇರ ಸಂಘ ಆರೋಪಿಸಿದೆ.
ಪುತ್ತೂರು ಪ್ರೆಸ್‌ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊಗೇರು ಜಿಲ್ಲಾ ಸಂಘದ ಮುಖಂಡರಾದ ಡಾ. ರಘು, ಕಾರವಾರದಲ್ಲಿ ಮೀನು ಹಿಡಿಯುವ ಕೆಲಸ ಮಾಡುವ ಹಿಂದುಳಿದ ವರ್ಗ ಪ್ರವರ್ಗ 1 ರಲ್ಲಿ ಬರುವ ಮೊಗವೀರರು 1976 ರಿಂದೀಚೆಗೆ ಪರಿಶಿಷ್ಟ ಪಂಗಡದ ಮೊಗೇರ ಜಾತಿಯ ಪ್ರಮಾಣ ಪತ್ರ ಪಡೆದು ಪರಿಶಿಷ್ಟರಿಗೆ ಸಿಗುವ ಸೌಲಭ್ಯಗಳಿಂದ ವಂಚಿಸುತ್ತಿದ್ದಾರೆ.
ಕಳೆದ 10 ವರ್ಷಗಳಿಂದ ಕಾರವಾರದಲ್ಲಿ ಈ ಪ್ರಮಾಣಪತ್ರ ಕೊಡುವುದನ್ನು ನಿಲ್ಲಿಸಲಾಗಿದ್ದು, ಇದನ್ನು ವಿರೋಧಿಸಿ ಮೊಗವೀರರು ಪ್ರತಿಭಟನೆ ನಡೆಸುತ್ತಿರುವುದನ್ನು ಖಂಡಿಸಿದ ಮೊಗೇರ ಸಂಘದ ಪದಾಧಿಕಾರಿಗಳು ಮೇ 10 ರಂದು ಜಿಲ್ಲೆಯ ಪ್ರತೀ ತಾಲೂಕು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. ಸಮಸ್ಯೆಗೆ ಪರಿಹಾರ ಸಿಗದೇ ಹೋದಲ್ಲಿ, ಮೇ 23 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಜಾಥಾ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
Kshetra Samachara
02/05/2022 04:17 pm