ಬ್ರಹ್ಮಾವರ: ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ ಕೀರ್ತಿಶೇಷ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಸ್ಮರಣಾರ್ಥ ಉಡುಪಿ ಜಿಲ್ಲೆಯ ನೀಲಾವರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಸ್ಮೃತಿ ವನಕ್ಕೆ ಇಂದು ಭೂಮಿ ಪೂಜೆ ನಡೆಯಿತು.
ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ಭೂಮಿ ಪೂಜೆ ನೆರವೇರಿತು.ಅರಣ್ಯ ಮಂತ್ರಿ ಉಮೇಶ ವಿ ಕತ್ತಿ ಶಿಲಾನ್ಯಾಸ ನೆರವೇರಿಸುವರು. ಉಡುಪಿ ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದು ,ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ , ಸಚಿವರುಗಳಾದ ಎಸ್ ಅಂಗಾರ , ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾದರು.
Kshetra Samachara
07/05/2022 11:30 am