ಶಿಮಂತೂರು:ಶಿಮಂತೂರು ಶ್ರೀ ಆದಿ ಜನಾರ್ದನ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಾದ ಮಂಗಳೂರಿನ ಕಲ್ಪ ರೈ ಹಾಗೂ ಮುಂಬೈನ ಉದ್ಯಮಿ ರಾಘು ಪಿ ಶೆಟ್ಟಿ ರವರಿಂದ ವಸ್ತ್ರ,ಕೊಡೆ ಹಾಗೂ ಪುಸ್ತಕ ವಿತರಣೆ ಮಾಡಿದರು.
ಶಿಮಂತೂರು ಆದಿ ಜನಾರ್ಧನ ದೇವಸ್ಥಾನದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ವೇಳೆ ದೇವಸ್ಥಾನದ ಅರ್ಚಕ ಪುರುಷೋತ್ತಮ ಭಟ್ ವಿಶೇಷ ಪ್ರಾರ್ಥನೆ ನಡೆಸಿ ದಾನಿಗಳ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೇರಣೆ ಶ್ಲಾಘನೀಯವಾಗಿದ್ದು ಮಕ್ಕಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಮಟ್ಟದ ಸಾಧನೆಗೆ ಪ್ರಯತ್ನಿಸಬೇಕು ಎಂದರು.
ಈ ಸಂದರ್ಭದಲ್ಲಿ ಸೀತಾರಾಮ್ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ ಯುವಕ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
14/05/2022 02:53 pm