ಸುಬ್ರಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಂಚಪರ್ವ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಖಂಡಿಸಿ ಮತ್ತು ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿ ಪಂಚಪರ್ವ ಸಿಬ್ಬಂದಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.
ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸುಮಾರು 27 ಜನ ಪಂಚಪರ್ವ ಸಿಬ್ಬಂದಿಗಳು ಕಳೆದ ಮೂರು ವರ್ಷಗಳಿಂದ ದೇಗುಲದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಇವರನ್ನು ವಜಾಗೊಳಿಸಲಾಗಿತ್ತು.ಇದೀಗ ತಮಗೆ ಕೆಲಸವಿಲ್ಲದೆ ಜೀವನ ನಡೆಸಲು ಕಷ್ಟವಾಗುತ್ತಿದೆ ಎಂದು ಪಂಚಪರ್ವ ಸಿಬ್ಬಂದಿಗಳು ಮನವಿ ಸಲ್ಲಿಸಿದ್ದು, ತಮ್ಮನ್ನು ದೇವರ ಸೇವೆಗೆ ಮರು ನೇಮಕಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ನೀಡಿದ ಮನವಿಯಲ್ಲಿ ವಿನಂತಿಸಿದ್ದಾರೆ.
ಮನವಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಪೂರಕವಾಗಿ ಸ್ಪಂದಿಸಿ ಮರು ನೇಮಕಗೋಳಿಸುವ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಮಣ್ಯದ ಮಲೆ ಕುಡಿಯ ಹಿತರಕ್ಷಣಾ ವೇದಿಕೆಯ ಸಂಚಾಲಕರು, ಹಾಗೂ ಪಂಚಪರ್ವ ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
24/05/2022 02:05 pm