ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನಲ್ಲಿ ಮುಸ್ಲಿಂ ಬಾಂಧವರಿಂದ ಬಕ್ರೀದ್ ಹಬ್ಬದ ಆಚರಣೆ

ಮಂಗಳೂರು: ತ್ಯಾಗ-ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಿದರು. ಮಸೀದಿಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿ ಭಕ್ತಿ ಭಾವ ಮೆರೆದರು.

ಮಂಗಳೂರು ನಗರದ ಬಾವುಟ ಗುಡ್ಡೆ ಮಸೀದಿ ಸೇರಿದಂತೆ ಕರಾವಳಿಯ ನಾನಾ ಮಸೀದಿ ಗಳಲ್ಲಿ ಮುಸ್ಲಿಮರು ಹೊಸ ಬಟ್ಟೆ ಧರಿಸಿ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಮಾಜ್ ಬಳಿಕ ಎಲ್ಲರೂ ಒಬ್ಬರನ್ನೊಬ್ಬರು ಪರಸ್ಪರ ಆಲಿಂಗಿಸಿ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿ ಕೊಂಡರು.

Edited By : Shivu K
Kshetra Samachara

Kshetra Samachara

10/07/2022 10:03 am

Cinque Terre

14.08 K

Cinque Terre

0

ಸಂಬಂಧಿತ ಸುದ್ದಿ