ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಇತಿಹಾಸ ಪ್ರಸಿದ್ಧ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ವಿಶೇಷ ಅನುದಾನ ದೊರಕಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 15 ಲಕ್ಷ ರೂ. ಮೊತ್ತದ ಚೆಕ್ ಅನ್ನು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದಿಂದ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರ, ಪುನರ್ನಿರ್ಮಾಣ ಕಾರ್ಯಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಿಶೇಷ ಆಸ್ಥೆವಹಿಸಿ ಮಾಡಿ ಅನುದಾನವನ್ನು ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ವೇಣೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೂ ಅನುದಾನ ಹೆಗ್ಗಡೆಯವರು ನೀಡಿದ್ದಾರೆ.
Kshetra Samachara
22/08/2022 05:37 pm