ಸುಳ್ಯ: ಬೂಡು ಶ್ರೀ ಭಗವತಿ ಯುವ ಸೇವಾ ಸಂಘದ ವತಿಯಿಂದ 17ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಪ್ರಭಾಕರ ರೈ ಎಣ್ಮೂರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ, ಅಖಿಲ ಭಾರತ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ, ಸೇರಿದಂತೆ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಗೋಪಾಲ ಎಸ್. ನಡುಬೈಲು ರವರು ಅಧ್ಯಕ್ಷತೆ ವಹಿಸಿದ್ದರು. ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿಭಾಗದಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಪರೇಡ್ ನಲ್ಲಿ ಭಾಗವಹಿಸಿದ ಸಾಹಿತ್ಯ ಕೇರ್ಪಳ ಇವರನ್ನು ಸನ್ಮಾನಿಸಲಾಯಿತು. ಪುಟಾಣಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಹಾಗು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
ಸಮಾರೋಪ ಸಮಾರಂಭ:
ಸಮಾರೋಪದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಬೂಡು ರಾಧಕೃಷ್ಣ ರೈ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಪ್ರಧಾನ ಕಾರ್ಯದರ್ಶಿ ಹಾಗು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ಕೆ.ವಿ. ರೇಣುಕಾಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.
Kshetra Samachara
23/08/2022 08:02 pm