ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಶಾಸಕರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ಶತ ಚಂಡಿಕಾಯಾಗ ಸಂಪನ್ನ

ಬೈಂದೂರು : ಬೈಂದೂರು ಶಾಸಕ ಬಿ.ಎಮ್ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶತ ಚಂಡಿಕಾಯಾಗ ನಡೆಯುತ್ತಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಶತ ಚಂಡಿಯಾಗದ ಮೂರನೇ ದಿನದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದ ಬಿ. ವೈ ರಾಘವೇಂದ್ರ ಕುಟುಂಬ ಸಮೇತವಾಗಿ ಭಾಗವಹಿಸಿ ಮೂಕಾಂಬಿಕೆಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಸುಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಕೆರಾಡಿ, ಸದಸ್ಯ ಸಂಧ್ಯಾ ರಮೇಶ್, ತಾ.ಪಂ ಮಾಜಿ ಉಮೇಶ್ ಶೆಟ್ಟಿ ಕಲ್ಗದ್ದೆ ಉಪಸ್ಥಿತರಿದ್ದರು. ಇಂದೂ ಕೂಡ ಧಾರ್ಮಿಕ ವಿಧಿಗಳು ನಡೆಯುತ್ತಿವೆ.

Edited By : Nagesh Gaonkar
Kshetra Samachara

Kshetra Samachara

26/08/2022 08:22 pm

Cinque Terre

8.63 K

Cinque Terre

0

ಸಂಬಂಧಿತ ಸುದ್ದಿ