ವಿಟ್ಲ: ಸೋಣ ಅಮವಾಸ್ಯೆಯ ದಿನದಿಂದ ಭಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳಮಲೆ ತೀರ್ಥಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ಇಂದು ನಡೆಯಿತು. ಅನಾದಿ ಕಾಲದಿಂದಲೂ ನಡೆದು ಬಂದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ತುಳುನಾಡಿನಲ್ಲಿ ಅತಿ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾ ತೀರ್ಥಕ್ಕೆ ಪ್ರಾರ್ಥನೆ ಸಲ್ಲಿಸಿ, ಕೇರ್ಪು ಇಟ್ಟು ಧಾರ್ಮಿಕ ವಿಧಿ-ವಿಧಾನವನ್ನು ನೆರವೇರಿಸಿ ಅರಸು ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಪಂಜುರ್ಲಿ ದೈವಗಳಿಗೆ ತಂಬಿಲ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು. ಆ. 27ರಿಂದ ಆ. 31ರ ವರೆಗೆ ಭಾದ್ರಪದ ಚೌತಿವರೆಗೆ ಗುಹಾ ತೀರ್ಥ ಸ್ನಾನಕ್ಕೆ ಭಕ್ತಾದಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
Kshetra Samachara
27/08/2022 03:26 pm