ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕರಾವಳಿಯಲ್ಲಿ ಕ್ರೈಸ್ತ ಬಾಂಧವರಿಂದ ಭಕ್ತಿ ಶ್ರದ್ಧೆಯ ಮೊಂತಿ ಫೆಸ್ಟ್: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಬಾಂಧವರು ಭಕ್ತಿ ಭಾವದಿಂದ ಆಚರಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ಚರ್ಚಿನ ಒಳಗೆ ಕೊಂಡೊಯ್ದು ಬಲಿಪೂಜೆಯಲ್ಲಿ ಪಾಲ್ಗೊಂಡರು. ಬಲಿಪೂಜೆಯಲ್ಲಿ ಧರ್ಮಗುರುಗುಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು.

ಬಲಿಪೂಜೆಯ ಬಳಿಕ ಆಶೀರ್ವದಿಸಿದ ಭತ್ತದ ತೆನೆಗಳನ್ನು ಪ್ರತಿ ಕುಟುಂಬಕ್ಕೆ ವಿತರಿಸಲಾಯಿತು . ಹೂವು ಕೊಂಡು ಹೋದ ಮಕ್ಕಳಿಗೆ ಮತ್ತು ಭಕ್ತಾದಿಗಳಿಗೆ ಸಿಹಿ ತಿಂಡಿಯನ್ನು ಹಾಗೂ ಕಬ್ಬನ್ನು ಹಂಚಲಾಯಿತು. ತೆನೆಹಬ್ಬವನ್ನು ಕೌಟುಂಬಿಕ ಹಬ್ಬವಾಗಿ ಪರಿಗಣಿಸಲಾಗುತ್ತಿದ್ದು, ಚರ್ಚಿನಿಂದ ತಂದ ಪವಿತ್ರ ಭತ್ತದ ತೆನೆಯನ್ನು ದೇವರ ಪೀಠದ ಮೇಲಿರಿಸಿ ಕುಟುಂಬದ ಎಲ್ಲಾ ಸದಸ್ಯರು ಜೊತೆಯಾಗಿ ಸೇರಿ ಪ್ರಾರ್ಥನೆ ನೆರವೇರಿಸಿ ಬಳಿಕ ಹೊಸ ಭತ್ತದ ತೆನೆಗಳನ್ನು ಹುಡಿ ಮಾಡಿ ಹಾಲು ಅಥವಾ ಪಾಯಸದೊಂದಿಗೆ ಕುಟುಂಬದ ಪ್ರತಿಯೊಬ್ಬರಿಗೂ ಸೇವಿಸಲು ನೀಡುತ್ತಾರೆ.

ಇಂದು ಮಧ್ಯಾಹ್ನ ಕುಟುಂಬದ ಎಲ್ಲಾ ಸದಸ್ಯರು ಜೊತೆಯಾಗಿ ಸೇರಿ ಸಂಪೂರ್ಣ ಸಸ್ಯಾಹಾರದ ಊಟವನ್ನು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವನೆ ಮಾಡುವ ಕ್ರಮ ಇದೆ. ಸಸ್ಯಹಾರ ಊಟದಲ್ಲಿ 3, 9 ಮತ್ತು 15 ಬಗೆಯ ಸಸ್ಯಹಾರ ಖಾದ್ಯ, ಪಾಯಸ, ಅನ್ನ, ಸಾಂಬಾರು ತಯಾರಿಸಲಾಗುತ್ತದೆ.

ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ. ಚಾರ್ಲ್ಸ್ ಮಿನೇಜಸ್ ನೇತೃತ್ವದಲ್ಲಿ ಮೋಂತಿ ಫೆಸ್ಟ್ ಜರುಗಿತು.

Edited By : Manjunath H D
Kshetra Samachara

Kshetra Samachara

08/09/2022 06:16 pm

Cinque Terre

4.13 K

Cinque Terre

0