ಕೊಲಕಾಡಿ: ಇಲ್ಲಿಗೆ ಸಮೀಪದ ಕೊಲಕಾಡಿ ಕುಂಜಾರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ವಿಜೃಂಭಣೆಯಿಂದ ನಡೆಯಿತು.
ವೇ.ಮೂ.ಕೊಲಕಾಡಿ ವಾದಿರಾಜ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶ್ರೀ ದುರ್ಗಾ ನಮಸ್ಕಾರ ಪೂಜೆಗೆ ಚಾಲನೆ ನೀಡಲಾಯಿತು. ಬಳಿಕ ಭಜನಾ ಕಾರ್ಯಕ್ರಮ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ, ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
27/09/2022 09:35 am