ಮುಲ್ಕಿ: ಶರನ್ನವರಾತ್ರಿ ಮಹೋತ್ಸವ ಸಂಭ್ರಮದಲ್ಲಿರುವ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿ ಆಶೀರ್ವಚನ ನೀಡಿದರು.
ಪೇಜಾವರ ಸ್ವಾಮಿಜಿ ಯವರನ್ನು ದೇವಸ್ಥಾನದ ವತಿಯಿಂದ ಪೂರ್ಣ ಕುಂಭದಲ್ಲಿ ಸ್ವಾಗತಿಸಲಾಯಿತು.
ಈ ಸಂದರ್ಭ ಅವರು ಆಶೀರ್ವಚನ ನೀಡಿ, ನವರಾತ್ರಿಯ ಪರ್ವಕಾಲದಲ್ಲಿ ಸಮಸ್ತ ಲೋಕಕ್ಕೆ ಸುಖ ಶಾಂತಿ ನೆಮ್ಮದಿಯನ್ನು ದೇವರು ಕರುಣಿಸಲಿ ಎಂದರು. ಈ ಸಂದರ್ಭ ದೇವಸ್ಥಾನದ ಅರ್ಚಕ ನರಸಿಂಹ ಭಟ್, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಸುನಿಲ್ ಆಳ್ವ, ಗೋಪಾಲಕೃಷ್ಣ ಭಟ್, ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
27/09/2022 10:55 pm