ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಗರ ಬಿಜೆಪಿಯಿಂದ ಶ್ರೀ ಶಾರದಾ ಪೂಜೆ ಸಮಾಪನ; ಮನ ತಣಿಸಿದ ಭಜನಾ ರಸದೌತಣ

ಉಡುಪಿ: ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶ್ರೀ ಶಾರದಾ ಪೂಜೆ ಸಂಪನ್ನಗೊಂಡಿತು.

3ನೇ ವರ್ಷದ ಶಾರದಾ ಪೂಜೆಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಟೇಶ್ ಮತ್ತು ಬಳಗದವರಿಂದ ಭಜನಾ ಸೇವೆ ನಡೆಯಿತು. ನೂರಾರು ಮಂದಿ ಭಾಗವಹಿಸಿದ್ದು, ಬಳಿಕ ಅನ್ನ ಪ್ರಸಾದ ಸ್ವೀಕರಿಸಿದರು.

ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್ ಸಹಿತ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

03/10/2022 08:02 pm

Cinque Terre

3.75 K

Cinque Terre

0

ಸಂಬಂಧಿತ ಸುದ್ದಿ