ಶಿರ್ವ: ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ದಾನಿಗಳ ಸಹಕಾರದಿಂದ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾ.ಪಂ. ವ್ಯಾಪ್ತಿಯ ಬಂಟಕಲ್‌ನಲ್ಲಿ ಹೈಟೆಕ್ ಅಂಗನವಾಡಿ ಕೇಂದ್ರ ಲೋಕಾರ್ಪಣೆಗೊಂಡಿದೆ. ಕಾಪು ಶಾಸಕ ಲಾಲಾಜಿ ಮೆಂಡನ್ ಕೇಂದ್ರವನ್ನು ಉದ್ಘಾಟಿಸಿದರು.
ಸುಮಾರು 20.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೈಟೆಕ್ ಹವಾನಿಯಂತ್ರಿತ ಅಂಗನವಾಡಿ ಕೇಂದ್ರ ಇದಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಮಾರು 16.5 ಲಕ್ಷ ರೂ.ಗಳಲ್ಲಿ ಕಟ್ಟಡ ನಿರ್ಮಿಸಿಕೊಟ್ಟಿದೆ. ದೇಶ ವಿದೇಶಗಳಲ್ಲಿ ನೆಲೆಸಿರುವ ದಾನಿಗಳು ಮತ್ತು ಸಂಘ ಸಂಸ್ಥೆಗಳು ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕೇಂದ್ರಕ್ಕೆ ಹೈಟೆಕ್ ಸ್ಪರ್ಶ ನೀಡಿವೆ.
ಅಂಗನವಾಡಿ ಸುತ್ತಲೂ ಆವರಣ ಗೋಡೆ, ಕೊಠಡಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಗೋಡೆ ಬರಹ, ಕಾರ್ಟೂನ್ ಚಿತ್ರಗಳು, ಕೇಬಲ್ ಟಿವಿ ಸಂಪರ್ಕದೊಂದಿಗೆ ಪುಟಾಣಿಗಳಿಗೆ ಕಾರ್ಟೂನ್ ನೆಟ್‌ವರ್ಕ್ ನೋಡುವ ಅವಕಾಶ ಕಲ್ಪಿಸಲಾಗಿದೆ. ಪುಟಾಣಿಗಳಿಗಾಗಿ ನೆರಳಿರುವ ಪ್ರತ್ಯೇಕ ಜಾರುಬಂಡಿ, ಮಕ್ಕಳ ಹೆತ್ತವರಿಗಾಗಿ ವಿರಮಿಸಲು ಕಾಂಕ್ರೀಟ್ ಬೆಂಚುಗಳು, ಎರಡು ಶೌಚಾಲಯ, 24 ಗಂಟೆಗಳ ಕುಡಿಯುವ ನೀರಿನ ವ್ಯವಸ್ಥೆಯೊಂದಿಗೆ ವಾಟರ್ ಪ್ಯೂರಿಫೈಯರ್, ಸೋಫಾ, ಚಪ್ಪಲ್ ಸ್ಟಾಂಡ್, ಬ್ಯಾಗ್ ಸ್ಟಾಂಡ್, ಮಕ್ಕಳಿಗಾಗಿ ಸಣ್ಣ ಕುರ್ಚಿಗಳು , ಸಮವಸ್ತ್ರ, ಟೇಬಲ್ ಮತ್ತು ಕುರ್ಚಿ ಹಾಗೂ ಆವರಣದಲ್ಲಿ ಸೋಲಾರ್ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲಾಗಿದೆ.
Kshetra Samachara
22/03/2022 09:58 pm