ಮಂಗಳೂರು: ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಇದೇ 30ರಂದು ಶನಿವಾರ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ, ''ಈ ವರ್ಷದ ಜಿಲ್ಲೆಯ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ಎಲಿಯನಡುಗೋಡು, ಆರಂಬೋಡಿ ಮತ್ತಿತರ ಗ್ರಾಮಸ್ಥರು ಮತ್ತು ಕಂಬಳಾಸಕ್ತರು ಶ್ರಮದಾನ ಮೂಲಕ ಕಂಬಳ ಕೆರೆ ದುರಸ್ತಿಗೊಳಿಸಿದ್ದಾರೆ. ಜಿಲ್ಲಾ ಕಂಬಳ ಸಮಿತಿ ನಿರ್ಧಾರದಂತೆ ಕೋವಿಡ್ ನಿಯಮಾವಳಿ ಪಾಲನೆ ಮಾಡಲಾಗುತ್ತದೆ. ಒಟ್ಟು 150ಕ್ಕೂ ಮಿಕ್ಕಿ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟದ ಅಧ್ಯಕ್ಷತೆಯನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ವಹಿಸಲಿದ್ದಾರೆ. ಸ್ಥಳೀಯ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಕಂಬಳಕ್ಕೆ ಚಾಲನೆ ನೀಡಲಿದ್ದು, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಮೂಡುಬಿದ್ರೆ ಚೌಟರ ಅರಮನೆ ಕುಲದೀಪ್ ಎಂ., ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಅನೇಕರು ನಾಯಕರು ಭಾಗವಹಿಸಲಿದ್ದಾರೆ.
Kshetra Samachara
29/01/2021 11:54 am