ವರದಿ: ಕೃಷ್ಣ ಅಜೆಕಾರು,
ಕಾರ್ಕಳ: ಕರಾವಳಿಯ ಪ್ರಾಚೀನ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ಗ್ರಾಮೀಣ ಕ್ರೀಡೆ ಮಾನ್ಯತೆ ನೀಡುವಂತೆ ಆಗ್ರಹಿಸಿ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಸೋಮವಾರ ವಿಶೇಷ ಕಂಬಳ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು ಸೋಮವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರಕಾರಿ ಕಾರ್ಯಕ್ರಮದಲ್ಲಿ ಮಿಯ್ಯಾರು ಕಂಬಳದ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸುವ ನಿಟ್ಟಿನಲ್ಲಿ ವಿಶೇಷ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು ವಿಶೇಷ ಕಂಬಳದಲ್ಲಿ ಸುಮಾರು 50ಕ್ಕೂ ಅಧಿಕ ಕೋಣಗಳು ಪಾಲ್ಗೊಂಡಿದ್ದವು
ಕಂಬಳಕ್ಕೆ ಗ್ರಾಮೀಣ ಕ್ರೀಡೆಯ ಮಾನ್ಯತೆ ನೀಡಬೇಕು. ಕರಾವಳಿ ಜಿಲ್ಲೆಯ ಸಂಕೇತವಾಗಿರುವ ಕಂಬಳ ಕ್ರೀಡೆಯು ನಶಿಸುವ ಹಂತದಲ್ಲಿದೆ ಇಂತಹ ಅಪರೂಪದ ಕಂಬಳ ಕ್ರೀಡೆಯನ್ನು ಉಳಿಸುವ ಕೆಲಸವಾಗಬೇಕು ಈ ನಿಟ್ಟಿನಲ್ಲಿ ಸರಕಾರ ಗ್ರಾಮೀಣ ಕ್ರೀಡೆಗಳ ವ್ಯಾಪ್ತಿಗೆ ಸೇರಿಸಬೇಕೆಂದು ಕಂಬಳ ಸಮಿತಿಯ ಸದಸ್ಯ ಸುಧಾಕರ ಶೆಟ್ಟಿ ಒತ್ತಾಯಿಸಿದರು.
Kshetra Samachara
29/08/2022 10:11 pm