ಬೈಂದೂರು: ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಯಶಸ್ವಿ ಬಾಬು ಪೂಜಾರಿ ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯ ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಪ್ರೌಢಶಾಲೆಯಲ್ಲಿ ನಡೆದ 2022-23ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆ ನಡೆಯಿತು. ಇದರಲ್ಲಿ ಯಶಸ್ವಿ ಪ್ರಥಮ ಸ್ಥಾನಿಯಾಗಿ ಕಾರವಾರದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Kshetra Samachara
24/08/2022 02:54 pm