ಉಡುಪಿ: ಉಡುಪಿಯಲ್ಲಿ ನೇಷನ್ ಫಸ್ಟ್ ತಂಡ "ಫಿಟ್ ರಹೋ ಉಡುಪಿ" ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ್ದ "75 ಕೀ.ಮೀ ಮ್ಯಾರಥಾನ್" ಓಟ ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಪೂರ್ಣಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಶಾಸಕ ಕೆ. ರಘುಪತಿ ಭಟ್ ಅವರು "ಫಿಟ್ ರಹೋ ಉಡುಪಿ" ಧ್ಯೇಯವಾಕ್ಯದೊಂದಿಗೆ ಈ ಕಾರ್ಯಕ್ರಮ ಆಯೋಜಿಸಿದ ನೇಷನ್ ಫಸ್ಟ್ ತಂಡದ ಪದಾಧಿಕಾರಿಗಳಿಗೆ ಹಾಗೂ ಸ್ಫೂರ್ತಿಯಿಂದ ಭಾಗವಹಿಸಿದ ಮತ್ತು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಹಿಂದುತ್ವದ ಪ್ರಮುಖ ವಾಗ್ಮಿ ಅಕ್ಷಯ ಗೋಖಲೆ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಗೌರವಾಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಗೌರವ ಸಲಹೆಗಾರರಾದ ಅಶೋಕ್ ಅಡ್ಯಂತಾಯ, ಅಧ್ಯಕ್ಷರಾದ ಡಾ. ಕೆಂಪರಾಜ್, ನೇಶನ್ ಫಸ್ಟ್ ತಂಡದ ಮೇಜರ್ ಪ್ರಕಾಶ್ ರಾವ್ ಹಾಗೂ ಉಡುಪಿ ನಗರಸಭೆಯ ಸದಸ್ಯರು ಉಪಸ್ಥಿತರಿದ್ದರು.
Kshetra Samachara
07/09/2021 10:15 pm