ಉಡುಪಿ: ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ಚಾಂಪಿಯನ್ ಶಿಪ್ ನಲ್ಲಿ ಉಡುಪಿ ಜಿಲ್ಲೆಯ ಕರಿಷ್ಮಾ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾಳೆ.
ದೆಹಲಿಯಲ್ಲಿ 23 ವಯೋಮಿತಿ ಒಳಗಿನ ಮೊದಲ ಚಾಂಪಿಯನ್ ಶಿಪ್ ನಡೆಯುತ್ತಿದೆ. ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿಯಾಗಿರುವ ಕರಿಷ್ಮಾ, ಎಲ್ ವಿ ಡಿ ಕಾಲೇಜು ರಾಯಚೂರಿನಲ್ಲಿ ಬಿಎಸ್ಸಿ ಅಂತಿಮ ವರ್ಷ ಪದವಿ ಕಲಿಯುತ್ತಿದ್ದಾರೆ.
ಸುದರ್ಶನ್ ಅನಿಲ್ ಮತ್ತು ಇಂದಿರಾ ದಂಪತಿ ಪುತ್ರಿ ಕರೀಷ್ಮಾ, ಬ್ರಹ್ಮಾವರ ಬೋರ್ಡ್ ಸಂಸ್ಥೆಯಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದಾಳೆ.
ಈ ಸಂದರ್ಭ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಪಾಲ್ಗೊಂಡಿದ್ದಳು. ಒಲಿಂಪಿಕ್ಸ್ ನಲ್ಲಿ ಚಿನ್ನದ ಸಾಧನೆ ಮಾಡಿರುವ ನೀರಜ್ ಚೋಪ್ರಾ ಅವರ ಟ್ರೈನರ್ ಕಾಶಿನಾಥ್ ನಾಯಕ್ ಈಕೆಗೂ ಆನ್ ಲೈನ್ ಟ್ರೈನಿಂಗ್ ಕೊಡುತ್ತಿದ್ದಾರೆ. ಬಾರಾಳಿ ಹೈಸ್ಕೂಲ್ ಮೈದಾನದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.
ದೆಹಲಿ ಚಾಂಪಿಯನ್ ಶಿಪ್ ನಲ್ಲಿ ಕರಿಷ್ಮಾ ಸನಿಲ್ 46.52 ಮೀಟರ್ ದೂರಕ್ಕೆ ಈಟಿ ಎಸೆದು ಸಾಧನೆ ಮಾಡಿದ್ದಾಳೆ. ಪಂಜಾಬ್ ಮತ್ತು ರಾಜಸ್ಥಾನದ ಅಥ್ಲೆಟ್ ಗಳನ್ನು ಹಿಂದಿಕ್ಕಿದ ಕರ್ನಾಟಕದ ಕರಿಷ್ಮಾ, ಮುಂದೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಉತ್ಸಾಹ ತೋರಿದ್ದಾಳೆ. ದೇಶಕ್ಕೆ ಪದಕ ತಂದುಕೊಡುವ ನಿರೀಕ್ಷೆ ಹುಟ್ಟಿಸಿದ್ದಾಳೆ.
Kshetra Samachara
01/10/2021 03:54 pm