ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 'ಫಿಟ್ ರಹೋ ಉಡುಪಿ' 75 ಕಿ.ಮೀ. ಮ್ಯಾರಥಾನ್ ಓಟ ಯಶಸ್ವಿ

ಉಡುಪಿ: ಉಡುಪಿಯಲ್ಲಿ ನೇಶನ್ ಫಸ್ಟ್ ತಂಡ 'ಫಿಟ್ ರಹೋ ಉಡುಪಿ' ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ್ದ 2 ದಿನಗಳ 75 ಕಿ.ಮೀ. ಮ್ಯಾರಥಾನ್ ಓಟ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದರಲ್ಲಿ ಪಾಲ್ಗೊಂಡ ಹಾಗೂ ಸಹಕರಿಸಿದವರನ್ನು ಅಭಿನಂದಿಸುವ ಕಾರ್ಯಕ್ರಮ ಇಂದು ನಡೆಯಿತು. ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಭಾಗವಹಿಸಿದರು.

ಶಾಸಕ ಕೆ. ರಘುಪತಿ ಭಟ್ ರವರು ಭಾಗವಹಿಸಿ ನೇಶನ್ ಫಸ್ಟ್ ತಂಡದ 'ಫಿಟ್ ರಹೋ ಉಡುಪಿ' ಓಟದಲ್ಲಿ ಭಾಗವಹಿಸಿದವರಿಗೆ ಹಾಗೂ ಸಹಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಬಳಿಕ ನೇಶನ್ ಫಸ್ಟ್ ತಂಡದ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ನೇಶನ್ ಫಸ್ಟ್ ತಂಡದ ಮೇಜರ್ ಪ್ರಕಾಶ್ ರಾವ್, ಸೂರಜ್ ಕಿದಿಯೂರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/09/2021 04:46 pm

Cinque Terre

2.2 K

Cinque Terre

0