ಕುಂದಾಪುರ: ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ನಾಗರಾಜ ಖಾರ್ವಿ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಚಿನ್ನ, 100 ಮೀ. ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಚಿನ್ನ, 200 ಮೀ.
ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ,
50x4 ಮಿಡ್ಲೆ ರಿಲೇಯಲ್ಲಿ ಕಂಚು ಹಾಗೂ 100X4 ಫ್ರೀ ಸ್ಟೈಲ್ ರಿಲೇಯಲ್ಲಿ ಕಂಚಿನ ಪದಕ ಗೆದ್ದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ನಾಗರಾಜ ಅವರು ಮೂಲತಃ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚುಗೋಡು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ಹಳೆವಿದ್ಯಾರ್ಥಿಯಾಗಿದ್ದಾರೆ. ರೇಷ್ಮೆ ಇಲಾಖೆಯ ಇನ್ಸ್ ಪೆಕ್ಟರ್ ಬಿ.ಕೆ.ನಾಯ್ಕ್ ಅವರು ಈಜು ತರಬೇತಿ ನೀಡಿದ್ದಾರೆ.
ನಾಗರಾಜ ಖಾರ್ವಿ ಈ ಹಿಂದೆ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು, ಬೀಗ ಹಾಕಿ ಸಮುದ್ರದಲ್ಲಿ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಒಂದು ಕಿ.ಮೀ. ದೂರವನ್ನು ಅತಿ ವೇಗವಾಗಿ ಈಜಿ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದ್ದಾರೆ.
Kshetra Samachara
23/10/2021 08:01 pm