ಮುಲ್ಕಿ: ಹಳೆಯಂಗಡಿಯ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ನೇತೃತ್ವದಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್(ರಿ)ವತಿಯಿಂದ
ಟೇಬಲ್ ಟೆನ್ನಿಸ್ ಪಂದ್ಯಾಟ ಸಮಾರೋಪ ಕಾರ್ಯಕ್ರಮ ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ವಹಿಸಿ ಮಾತನಾಡಿ ಕಳೆದ ಎರಡು ದಿನಗಳಿಂದ ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಕ್ರೀಡಾಪಟುಗಳು ಭಾಗವಹಿಸಿದ ಈ ಪಂದ್ಯಾಟ ಯಶಸ್ವಿಯಾಗಿ ನಡೆದಿದ್ದು ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ಎಂದರು.
ಕಾರ್ಯಕ್ರಮದ ಮುಖ್ಯ
ಅತಿಥಿಗಳಾಗಿ ಮನಪಾ ಮಾಜೀ ಸದಸ್ಯೆ ಪ್ರತಿಭಾ ಕುಳಾಯಿ ಮಾತನಾಡಿ ಕ್ರೀಡಾ ಮನೋಭಾವದ ಮೂಲಕ ಕ್ರೀಡೆಯಲ್ಲಿ ಭಾಗಿಯಾಗಿದ ಕ್ರೀಡಾಳುಗಳ ಸಾಧನೆ ಅಭಿನಂದನೀಯ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್,
ಟೋರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ರಮೇಶ್ ಶೆಟ್ಟಿ, ಅಂತರಾಷ್ಟ್ರೀಯ ತರಬೇತುದಾರ ಕೃನಾಲ್ ತಲಂಗ್, ಆನಂದ್ ಪಡುಕೋಣೆ, ಮ್ಯಾಚ್ ರೆಫ್ರಿ ಸ್ಯಾಮ್ ಮತ್ತಿತರರು ಉಪಸ್ಥಿತರಿದ್ದರು.
ಒಟ್ಟು 12 ತಂಡಗಳು ಭಾಗವಹಿಸಿದ್ದ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ ಪಂದ್ಯಾಟ ಅಂತಿಮ ಪಂದ್ಯದಲ್ಲಿ ಉಡುಪಿ ಪ್ಯಾಡ್ಲರ್ಸ್ ತಂಡವು ಸವ್ಯಸಾಚಿ ಫಾಸ್ಟ್ ಫೀಟ್ ತಂಡವನ್ನು 4-1 ಅಂತರದಿಂದ ಸೋಲಿಸಿ ಟ್ರೋಫಿ ಗಳಿಸಿತು.
ಪುರುಷರ ಸಿಂಗಲ್ಸ್ ಪ್ರಶಸ್ತಿ ಫೈನಲ್ ನಲ್ಲಿ ರಕ್ಷಿತ್ ಆರ್.3-2 ಅಂತರದಿಂದ ಅಲಿ ಮೊಹಮದ್ ಅವರನ್ನು ಸೋಲಿಸಿ ಪ್ರಶಸ್ತಿ ಗಳಿಸಿದರು.
ಮಹಿಳೆಯರ ಸಿಂಗಲ್ಸ್ ಪ್ರಶಸ್ತಿ ಅಂತಿಮ ಪಂದ್ಯದಲ್ಲಿ ಕೌಶನಿ ನಾಥ್ 3-0 ಅಂತರದಿಂದ ಸೆನೋರ ಡಿಸೋಜ ಅವರನ್ನು ಸೋಲಿಸಿ ಪ್ರಶಸ್ತಿ ಗಳಿಸಿದರು.ಕಾರ್ಯಕ್ರಮದಲ್ಲಿ ಕ್ರೀಡೆಯನ್ನು ಸಂಘಟಿಸಿದ ಗೌತಮ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಪ್ರಿಯಾಂಕ ಪಾಟೀಲ್ ನಿರೂಪಿಸಿದರು.
Kshetra Samachara
08/11/2021 08:19 am